ಐಪಿಎಲ್‌ ಪ್ಲೇ ಆಫ್‌, ಫೈನಲ್‌ ಪಂದ್ಯಗಳಿಗೆ ಪೂರ್ಣ ಪ್ರಮಾಣದ ಪ್ರೇಕ್ಷಕರ ಉಪಸ್ಥಿತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
2022 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪ್ಲೇ ಆಫ್‌ ಮತ್ತು ಫೈನಲ್‌ ಪಂದ್ಯಗಳು ಪೂರ್ಣ ಪ್ರಮಾಣದ ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ.
ಪ್ರಸ್ತುತ ಲೀಗ್ ಹಂತದ ಐಪಿಎಲ್‌ ಪಂದ್ಯಗಳು ಸಂಪೂರ್ಣವಾಗಿ ಮುಂಬೈ ಮತ್ತು ಪುಣೆಯ ನಾಲ್ಕು ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗಿದೆ. ಕೋಲ್ಕತ್ತಾ ಮತ್ತು ಅಹಮದಾಬಾದ್‌ ಕ್ರೀಡಾಂಗಣಗಳಲ್ಲಿ ಪ್ಲೇ ಆಫ್‌ ಪಂದ್ಯಗಳನ್ನು ಆಯೋಜನೆ ಮಾಡಲಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ವಾಲಿಫೈಯರ್ ಪಂದ್ಯವನ್ನು ಮೇ 24 ರಂದು ಆಯೋಜಿಸಲಾಗಿದೆ. ಎಲಿಮಿನೇಟರ್ ಪಂದ್ಯ ಅದರ ಮರುದಿನ(25) ನಡೆಯುತ್ತದೆ. ಕ್ವಾಲಿಫೈಯರ್ 2 ಪಂದ್ಯವನ್ನು ಮೇ 27 ರಂದು ಆಯೋಜಿಸಲಾಗಿದೆ. ಮೇ 29 ರಂದು ಫೈನಲ್ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!