Saturday, March 25, 2023

Latest Posts

ಐಪಿಎಲ್ 2022 ರ ವೇಳಾಪಟ್ಟಿ ಪ್ರಕಟ: ಮೊದಲ ಪಂದ್ಯದಲ್ಲಿ ಕೋಲ್ಕತ್ತಾ- ಚೆನ್ನೈ ಮುಖಾಮುಖಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾರ್ಚ್ 26 ರಿಂದ ಆರಂಭವಾಗುವ ಐಪಿಎಲ್ 2022ರ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಗೊಳಿಸಿದ್ದು, ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹಾಲಿ ಮತ್ತು ನಾಲ್ಕು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ.
ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿರುವ ಟಾಟಾ ಐಪಿಎಲ್ 2022ರಲ್ಲಿ ಒಟ್ಟು 70 ಲೀಗ್ ಪಂದ್ಯಗಳು ಮತ್ತು 4 ಪ್ಲೇಆಫ್ ಪಂದ್ಯಗಳನ್ನು 65 ದಿನಗಳ ಅವಧಿಯಲ್ಲಿ ನಡೆಯಲಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಾರ್ಚ್ 26 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹಾಲಿ ಮತ್ತು ನಾಲ್ಕು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ.
ಇನ್ನು ಈ ಬಾರಿ ಇಬ್ಬರು ಹೊಸಬರಾದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಐಪಿಎಲ್ ಜೊತೆ ಸೇರಿದ್ದು, ಮಾರ್ಚ್ 28 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗುವ ಮೂಲಕ ತಮ್ಮ ಖಾತೆಗಳನ್ನು ತೆರೆಯಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!