ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಇಂದು ಮುಕ್ತಾಯವಾಗಲಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ಫೈನಲ್ಸ್‌ಗೆ ಪ್ರವೇಶಿಸಿದೆ. ಇಂದು ಹೈ ವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿದ್ದು, ಐಪಿಎಲ್ ಅಭಿಮಾನಿಗಳು ಉತ್ಸುಕರಾಗಿ ಕಾಯುತ್ತಿದ್ದಾರೆ.
ಹಾಲಿ ಚಾಂಪಿಯನ್ಸ್ ಹಾಗೂ ಮಾಜಿ ಚಾಂಪಿಯನ್ಸ್ ಕಾದಾಟಕ್ಕೆ ಇಡೀ ವಿಶ್ವವೇ ಕಾತುರರಾಗಿ ಕಾದು ಕುಳಿತಿದೆ. ಈ ಬಾರಿ ಸಮಾರೋಪ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿದ್ದು, ಡಿಜೆ ನ್ಯೂಕ್ಲಿಯಾ ಪ್ರದರ್ಶನ ನಡೆಯಲಿದೆ. ಇದರ ಜೊತೆಗೆ ಜೋನಿತಾ ಗಾಂಧಿ ಮತ್ತು ಡಿವೈನ್ ಕಾಮಿಡಿ ಶೋ ಕೂಡ ಇದೆ.
ಅಹಮದಾಬಾನ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಡೆಯ ಪಂದ್ಯ ನಡೆಯಲಿದ್ದು, ಸಂಜೆ 6 ಗಂಟೆಗೆ ಸಮಾರಂಭ ಆರಂಭವಾಗಲಿದೆ.