IPL 2023: ಕೀರಾನ್ ಪೊಲಾರ್ಡ್ ಕೈಬಿಟ್ಟ ಮುಂಬೈ, ಜಡೇಜಾರನ್ನು ತಂಡದಲ್ಲೇ ಉಳಿಸಿಕೊಂಡ ಸಿಎಸ್‌ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಐಪಿಎಲ್ 2023ಕ್ಕೆ ಸಿದ್ಧತೆಗಳು ಪ್ರಾರಂಭವಾಗಿದೆ. ನವೆಂಬರ್ 15ರ ಒಳಗೆ ಎಲ್ಲಾ ಪ್ರಾಂಚೈಸಿಗಳು ತಮ್ಮ ತಂಡದಲ್ಲಿ ಉಳಿಸಿಕೊಂಡ ಆಟಗಾರರ ಅಂತಿಮ ಪಟ್ಟಿ ಸಲ್ಲಿಸಲು ಬಿಸಿಸಿಐ ಗಡುವು ನೀಡಿದೆ. ಈ ಹಿನ್ನೆಲೆಯಲ್ಲಿ 5 ಬಾರಿಯ IPL ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು 4 ಬಾರಿ ವಿಜೇತರಾದ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಾವು ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಸಿಸಿಐಗೆ ನೀಡಿದೆ.
ವರದಿಯ ಪ್ರಕಾರ, ರೋಹಿತ್ ಶರ್ಮಾ ಪಡೆ ತಂಡದ ಸ್ಟಾರ್ ಆಲ್ ರೌಂಡರ್ ಕೀರಾನ್ ಪೊಲಾರ್ಡ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಜೊತೆಗೆ ವೆಸ್ಟ್ ಇಂಡೀಸ್ ಆಲ್ ರೌಂಡರ್ ಫ್ಯಾಬಿಯನ್ ಅಲೆನ್ ಮತ್ತು ಇಂಗ್ಲೆಂಡ್ ವೇಗಿ ಟೈಮಲ್ ಮಿಲ್ಸ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.
ಐಪಿಎಲ್ 2022 ಪ್ಲೇಆಫ್‌ಗಳಿಗೆ ಅರ್ಹತೆ ಪಡೆಯಲು ವಿಫಲವಾದ ಸಿಎಸ್‌ಕೆ ತಂಡವು ಮಾಜಿ ನಾಯಕ ರವೀಂದ್ರ ಜಡೇಜಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಕ್ರಿಸ್ ಜೋರ್ಡಾನ್ ಮತ್ತು ನ್ಯೂಜಿಲೆಂಡ್ ಸ್ಟಾರ್ ಆಟಗಾರರಾದ ಆಡಮ್ ಮಿಲ್ನೆ ಮತ್ತು ಮಿಚೆಲ್ ಸ್ಯಾಂಟ್ನರ್ ಅವರಂತಹ ಅಂತರರಾಷ್ಟ್ರೀಯ ಕ್ರಿಕೆಟಿಗರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. MI ಮತ್ತು CSK ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಎರಡು ಅತ್ಯಂತ ಯಶಸ್ವಿ ಫ್ರಾಂಚೈಸಿಗಳಾಗಿವೆ.
ಐಪಿಎಲ್ 2023 ರ ಕಿರು-ಹರಾಜು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದ್ದು, ಪೊಲಾರ್ಡ್, ಜೋರ್ಡಾನ್, ಸ್ಯಾಂಟ್ನರ್ ಮತ್ತು ಮಿಲ್ನೆ ಈಗ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹರಾಜಿಗೂ ಮುನ್ನ, ನವೆಂಬರ್ 15 ರೊಳಗೆ ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ನೀಡುವಂತೆ ಬಿಸಿಸಿಐ ಪ್ರತಿ ಫ್ರಾಂಚೈಸಿಗೆ ಕೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!