IPL 2024 | ಲಖನೌ ವಿರುದ್ಧ ಟಾಸ್ ಗೆದ್ದ ಬೆಂಗಳೂರು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಐಪಿಎಲ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಆರ್‌ಸಿಬಿಯದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಲ್ಜಾರಿ ಜೋಸೆಫ್ ಬದಲಿಗೆ ರೀಸ್ ಟಾಪ್ಲೆ ತಂಡ ಕೂಡಿಕೊಂಡಿದ್ದಾರೆ.

ಇನ್ನೊಂದೆಡೆ ಕೆ ಎಲ್ ರಾಹುಲ್ ನಾಯಕನಾಗಿ ಕಣಕ್ಕಿಳಿದಿದ್ದಾರೆ. ಕಳೆದ ಪಂದ್ಯದಲ್ಲಿ ರಾಹುಲ್ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಲಖನೌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮೊಯ್ಸಿನ್ ಖಾನ್ ಬದಲಿಗೆ ಯಶ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!