ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಐಪಿಎಲ್ ಗೆ ಫ್ರಾಂಚೈಸಿಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ತಂಡದಲ್ಲಿ ಮೇಜರ್ ಸರ್ಜರಿ ಮಾಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗ ಮನೀಶ್ ಪಾಂಡೆ ಸೇರಿದಂತೆ 11 ಆಟಗಾರರಿಗೆ ಗೇಟ್‌ಪಾಸ್ ನೀಡಿದೆ.
ರಿಲೇ ರೂಸ್ಸೋ, ಚೇತನ್ ಸಕಾರಿಯಾ. ರೋವ್ಮನ್ ಪೋವೆಲ್, ಮನೀಶ್ ಪಾಂಡೆ, ಫಿಲ್ ಸಾಲ್ಟ್, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್ ಹಾಗೂ ಪ್ರಿಯಂ ಗರ್ಗ್ ಅವರನ್ನು ತಂಡದಿಂದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಲೀಸ್ ಮಾಡಿದೆ.
ಈ ಬಾರಿಯ ಐಪಿಎಲ್‌ನಲ್ಲಿ ರಿಷಭ್ ಪಂತ್ ಸಂಪೂರ್ಣ ಫಿಟ್ ಆಗಿರುವುದರಿಂದ ಬಹುತೇಕ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಇದರ ಜತೆಗೆ ಡೇವಿಡ್ ವಾರ್ನರ್, ಪೃಥ್ವಿ ಶಾ ಅವರನ್ನು ರೀಟೈನ್ ಮಾಡಿಕೊಂಡಿದೆ. ಅಕ್ಷರ್ ಪಟೇಲ್ ಕೂಡಾ ತಂಡದಲ್ಲೇ ಉಳಿದುಕೊಂಡಿದ್ದರಿಂದ ಬಲಿಷ್ಠ ತಂಡವನ್ನು ಕಟ್ಟುವ ಲೆಕ್ಕಾಚಾರದಲ್ಲಿದೆ.
ಇದೀಗ ಡಿಸೆಂಬರ್ 19ರಂದು ನಡೆಯಲಿರುವ ಐಪಿಎಲ್ ಆಟಗಾರರ ಹರಾಜಿನಲ್ಲಿ ಒಟ್ಟು 9 ಆಟಗಾರರನ್ನು ಖರೀದಿಸಲು ಅವಕಾಶವಿದ್ದು, ಈ ಪೈಕಿ ಗರಿಷ್ಠ 5 ವಿದೇಶಿ ಆಟಗಾರರನ್ನು ಖರೀದಿಸಲು ಅವಕಾಶವಿದೆ.