IPL 2024 | ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್‌ನ ಇಂದಿನ ಪಂದ್ಯದಲ್ಲಿ ರಾಜಸ್ಥಾನ ಮತ್ತು ದೆಹಲಿ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ರಾಜಸ್ಥಾನ ರಾಯಲ್ಸ್‌ನ ತವರು ಮೈದಾನವಾದ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯವನ್ನು ಆಡಲು ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಸಿದ್ಧವಾಗಿದೆ. ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ.

ಡೆಲ್ಲಿ ತಂಡ ತನ್ನ ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದರೆ. ರಾಜಸ್ಥಾನ್ ರಾಯಲ್ಸ್ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿತು. ಹೀಗಾಗಿ ಡೆಲ್ಲಿ ತಂಡ ತನ್ನ ಮೊದಲ ಗೆಲುವಿನ ಹುಡುಕಾಟದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತನ್ನ ಗೆಲುವಿನ ಲಯ ಮುಂದುವರೆಸಲು ಎದುರು ನೋಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!