IPL-2024 | ಚೆನ್ನೈ ವಿರುದ್ಧ ಟಾಸ್ ಗೆದ್ದ ಗುಜರಾತ್ ಬೌಲಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್​ ಮೊದಲು ಬ್ಯಾಟ್ ಮಾಡಲಿದೆ.

ಕಳೆದ ಬಾರಿಯ ಫೈನಲ್ ಪಂದ್ಯದ ಬಳಿಕ ಉಭಯ ತಂಡಗಳು ಇದೇ ಮೊದಲ ಬಾರಿ ಮುಖಾಮುಖಿಯಾಗುತ್ತಿದ್ದು, ಹೀಗಾಗಿ ಈ ಪಂದ್ಯದಲ್ಲೂ ರೋಚಕ ಪೈಪೋಟಿ ನಿರೀಕ್ಷಿಸಬಹುದು.

ಅಂದರೆ ಕಳೆದ ಬಾರಿ ಫೈನಲ್ ಆಡುವಾಗ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡಿದ್ದರು. ಇದೀಗ ಉಭಯ ತಂಡಗಳ ನಾಯಕರುಗಳು ಬದಲಾಗಿದ್ದು, ಅದರಂತೆ ಸಿಎಸ್​ಕೆ ತಂಡವನ್ನು ರುತುರಾಜ್ ಗಾಯಕ್ವಾಡ್ ಹಾಗೂ ಗುಜರಾತ್ ಟೈಟಾನ್ಸ್ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸುತ್ತಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!