ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಐಪಿಎಲ್ಗೆ ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಶರ್ಮ ಬದಲು, ಇತ್ತೀಚೆಗೆ ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ತಂಡ ಕೂಡಿಕೊಂಡಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಘೋಷಣೆ ಮಾಡಿದೆ.
ರೋಹಿತ್ ಶರ್ಮ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. 2013ರ ಐಪಿಎಲ್ನ ನಡುವೆಯೇ ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಯಕರನ್ನಾಗಿ ಘೋಷಣೆ ಮಾಡಿತ್ತು.2013ರ ಋತುವಿನ ಮೂಲಕ ಐಪಿಎಲ್ಗೆ ಪಾದಾರ್ಪಣೆ ಮಾಡಿದ್ದ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರವಾಗಿ 92 ಪಂದ್ಯವಾಡಿದ್ದರು. ಆ ಬಳಿಕ ಅವರು ಗುಜರಾತ್ ಟೈಟಾನ್ಸ್ ತಂಡಕ್ಕೆ ವರ್ಗಾವಣೆಯಾಗಿದ್ದರು