IPL- 2024 | ಕೊನೆಗೂ ಗೆಲುವಿನ ಖಾತೆ ತೆರೆದ ಮುಂಬೈ ಇಂಡಿಯನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುಂಬೈ ಇಂಡಿಯನ್ಸ್ ಎದುರು ಡೆಲ್ಲಿ ಕ್ಯಾಪಿಟಲ್ಸ್ ತಂಡವು 29 ರನ್ ಅಂತರದ ಸೋಲು ಅನುಭವಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿನ ಖಾತೆ ತೆರೆದಿದೆ.

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಗೆಲ್ಲಲು 235 ರನ್ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲೇ ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಪೃಥ್ವಿ ಶಾ ಹಾಗೂ ಅಭಿಷೇಕ್ ಪೋರೆಲ್ 88 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಚುರುಕಿನ ಬ್ಯಾಟಿಂಗ್ ನಡೆಸಿದ ಪೃಥ್ವಿ ಶಾ 40 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 66 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಇನ್ನು ಅಭಿಷೇಕ್ ಪೋರೆಲ್ 41 ರನ್ ಸಿಡಿಸಿ ಬುಮ್ರಾಗೆ ಎರಡನೇ ಬಲಿಯಾದರು.

ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಕೈಕೊಟ್ಟರು. ಹೀಗಿದ್ದೂ ಒಂದು ತುದಿಯಲ್ಲಿ ಬ್ಯಾಟಿಂಗ್ ನಡೆಸಿದ ಟ್ರಿಸ್ಟನ್ ಸ್ಟಬ್ಸ್ ಕೇವಲ 19 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಸ್ಟಬ್ಸ್ 25 ಎಸೆತಗಳನ್ನು ಎದುರಿಸಿ 3 ಬೌಂಡರಿ 7 ಸಿಕ್ಸರ್ ಸಹಿತ ಅಜೇಯ 71 ರನ್ ಸಿಡಿಸದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!