IPL 2024 | ಐಪಿಎಲ್ ಅರ್ಧಕ್ಕೆ ಬಿಟ್ಟು ತಂಡಗಳನ್ನು ತೊರೆದ ಪ್ಲೇಯರ್ಸ್, ಅಸಲಿ ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2024ರ ಟೂರ್ನಿ ಅಂತಿಮ ಹಂತ ತಲುಪುತ್ತಿದೆ. ಇದರ ಬೆನ್ನಲ್ಲೇ ಬಹು ನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಕೆಲವು ತಂಡಗಳು ಈಗಾಗಲೇ ಸಿದ್ಧತೆಗಳನ್ನು ಕೈಗೊಂಡಿವೆ. ಈ ಕಾರಣಕ್ಕಾಗಿಯೇ ಆಂಗ್ಲ ಆಟಗಾರರು ಐಪಿಎಲ್ ತೊರೆದು ತಮ್ಮ ದೇಶಕ್ಕೆ ಮರಳಲು ಆರಂಭಿಸಿದ್ದಾರೆ.

ಇಂಗ್ಲೆಂಡ್ 2022ರ ಟಿ20 ವಿಶ್ವಕಪ್ ಗೆದ್ದಿತ್ತು. ಜೂನ್ 1ರಿಂದ ಆರಂಭವಾಗಲಿರುವ ಟೂರ್ನಿಗೂ ಮುನ್ನ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಟಿ20 ಸರಣಿ ಆಡಲಿದೆ.ಈ ಕಾರಣಕ್ಕಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತನ್ನ ಆಟಗಾರರನ್ನು ಐಪಿಎಲ್‌ನಿಂದ ಹಿಂತಿರುಗುವಂತೆ ಆದೇಶಿಸಿದೆ.

ರಾಜಸ್ಥಾನ್ ರಾಯಲ್ಸ್ ಆರಂಭಿಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಇನ್ನು ಮುಂದೆ ಐಪಿಎಲ್ 2024 ರಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬಟ್ಲರ್ ಇಂಗ್ಲೆಂಡ್ ತಂಡದ ನಾಯಕ. ಅಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳಾದ ವಿಲ್ ಜ್ಯಾಕ್ ಮತ್ತು ರೀಸ್ ಟೋಪ್ಲಿ ಕೂಡ ತಮ್ಮ ದೇಶಕ್ಕೆ ಮರಳಿದ್ದಾರೆ.

ಬಟ್ಲರ್, ವಿಲ್ ಜ್ಯಾಕ್ ಮತ್ತು ಟೋಪ್ಲಿ ಜೊತೆಗೆ ಇಂಗ್ಲೆಂಡ್‌ನ ಹಲವು ಪ್ರಮುಖ ಆಟಗಾರರು ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಫಿಲ್ ಸಾಲ್ಟ್ ಹೆಸರೂ ಸೇರಿದೆ. ಕೆಕೆಆರ್‌ಗಾಗಿ ಅವರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್​ನ ಮೂವರು ಆಟಗಾರರು ಮರಳಲಿದ್ದಾರೆ. ಸ್ಯಾಮ್ ಕರ್ರಾನ್ ಮತ್ತು ಜಾನಿ ಬೈರ್‌ಸ್ಟೋ ಅವರ ಹೆಸರುಗಳು ಇದರಲ್ಲಿವೆ. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್ ಮೊಯಿನ್ ಅಲಿ ಕೂಡ ಇಂಗ್ಲೆಂಡ್‌ಗೆ ಪ್ರಯಾಣಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!