ಐಪಿಎಲ್ 2024 । ಗುಜರಾತ್ ಎದುರು ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೋಶ್ ಲಿಟ್ಲ್ ಹಾಗೂ ಮಾನವ್ ತಂಡ ಕೂಡಿಕೊಂಡಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕಳೆದ ಪಂದ್ಯದಲ್ಲಿ ಆರ್‌ಸಿಬಿ ಶರಣಾಗಿದ್ದ ಗುಜರಾತ್‌ ಟೈಟಾನ್ಸ್, ಈಗ ಆರ್‌ಸಿಬಿಯನ್ನು ಅವರದೇ ತವರಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!