IPL -2024 | ಗುಜರಾತ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಟಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಪಿಎಲ್ 2024ರಲ್ಲಿ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಮುಂಬೈ ಇಂಡಿಯನ್ಸ್ ನಾಯಕನಾದ ಹಾರ್ದಿಕ್ ಪಾಂಡ್ಯ ತಮ್ಮ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿದ್ದಾರೆ. ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ 7 ಬ್ಯಾಟ್ಸ್‌ಮನ್‌ಗೆ ಸ್ಥಾನ ನೀಡಲಾಗಿದೆ. ಕಳೆದ ಆವೃತ್ತಿವರೆಗೆ ನಾಯಕನಾಗಿದ್ದ ರೋಹಿತ್ ಶರ್ಮಾ ಈ ಬಾರಿ ಬ್ಯಾಟ್ಸ್‌ಮನ್ ಆಗಿ ಸ್ಥಾನ ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯ ತಂಡ ತೊರೆದ ಬಳಿಕ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಬಡ್ತಿಪಡೆದಿರುವ ಶುಭಮನ್ ಗಿಲ್ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದ್ದಾರೆ. ಈ ಮೂಲಕ ಶುಬಾರಂಭದ ವಿಶ್ವಾಸದಲ್ಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!