ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 2025 ರಲ್ಲಿ ಕಳಪೆ ತಂಡವಾಗಿ ಗುರುತಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ (CSK), ಪ್ಲೇಆಫ್ ರೇಸ್ ನಿಂದ ನಿರ್ಗಮಿಸಿದ ಮೊದಲ ತಂಡವಾಗಿದೆ.18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿರುವುದು ಇದು ಎರಡನೇ ಬಾರಿ.
ಚೆನ್ನೈ ಸೂಪರ್ ಕಿಂಗ್ಸ್ 2025 ಕ್ಕಿಂತ ಮೊದಲು 2020ರ ಟೂರ್ನಮೆಂಟ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡವಾಗಿತ್ತು. ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 16 ಆವೃತ್ತಿಗಳಲ್ಲಿ ನಾಲ್ಕು ಆವೃತ್ತಿಗಳಲ್ಲಿ ಪ್ಲೇ ಆಫ್ ಪ್ರವೇಶಿಸಲು ವಿಫಲವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ತಂಡಗಳು ಅತಿ ಹೆಚ್ಚು ಬಾರಿ, ತಲಾ 3 ಬಾರಿ ಪ್ಲೇಆಫ್ ರೇಸ್‌ನಿಂದ ನಿರ್ಗಮಿಸಿವೆ. ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸತತ ಎರಡು ಬಾರಿ ಮೊದಲ ತಂಡವಾಗಿ ಪ್ಲೇಆಫ್ ರೇಸ್ ನಿಂದ ನಿರ್ಗಮಿಸಿವೆ.
ಇವುಗಳ ಜೊತೆಗೆ, ಕೋಲ್ಕತ್ತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಇಂಡಿಯಾ, ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸಹ ತಲಾ ಒಮ್ಮೊಮ್ಮೆ ಮೊದಲ ತಂಡವಾಗಿ ಪ್ಲೇ ಆಫ್ ರೇಸ್‌ನಿಂದ ಮೊದಲ ತಂಡವಾಗಿ ಹೊರಬಿದ್ದಿವೆ.