IPL 2025 | ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಿಕ್ಕೇಬಿಟ್ರು ನಯಾ ಕ್ಯಾಪ್ಟನ್ ಕಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ.

ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here