March 29, 2026
Sunday, March 29, 2026
spot_img

IPL 2026 | ಇಷ್ಟು ಕಡಿಮೆ ಓವರ್ ನಲ್ಲಿ ಅಷ್ಟೊಂದು ರನ್: T20 ವಿಶ್ವ ದಾಖಲೆ ಉಡೀಸ್ ಮಾಡಿದ RCB

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಫೋಟಕ ಆಟದ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಈ ಪಂದ್ಯದಲ್ಲಿ 200ಕ್ಕೂ ಹೆಚ್ಚು ರನ್ ಗುರಿಯನ್ನು ಅತೀ ವೇಗವಾಗಿ ಬೆನ್ನತ್ತಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 201 ರನ್ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದರು.

ಇದನ್ನೂ ಓದಿ:

ವಿರಾಟ್ ಕೊಹ್ಲಿ 69 ರನ್, ದೇವದತ್ ಪಡಿಕ್ಕಲ್ 61 ರನ್ ಮತ್ತು ರಜತ್ ಪಾಟಿದಾರ್ 31 ರನ್‌ಗಳೊಂದಿಗೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಪರಿಣಾಮವಾಗಿ ಆರ್‌ಸಿಬಿ ಕೇವಲ 15.4 ಓವರ್‌ಗಳಲ್ಲಿ 203 ರನ್ ಗಳಿಸಿ 6 ವಿಕೆಟ್‌ಗಳ ಜಯ ದಾಖಲಿಸಿತು.

ಈ ಗೆಲುವಿನೊಂದಿಗೆ ಟಿ20 ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 200+ ರನ್ ಚೇಸ್ ಮಾಡಿದ ತಂಡ ಎಂಬ ಹೊಸ ವಿಶ್ವ ದಾಖಲೆಯನ್ನು ಆರ್‌ಸಿಬಿ ತನ್ನದಾಗಿಸಿಕೊಂಡಿದೆ. ಈ ಹಿಂದೆ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ಹೆಸರಿನಲ್ಲಿ ಇತ್ತು.

ಒಟ್ಟಿನಲ್ಲಿ, ಆರ್‌ಸಿಬಿ ಆರಂಭದಲ್ಲೇ ಭರ್ಜರಿ ಪ್ರದರ್ಶನ ನೀಡಿ ಟೂರ್ನಿಯಲ್ಲಿ ತಮ್ಮ ಬಲವನ್ನು ಸಾಬೀತುಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !