Sunday, December 21, 2025

IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜನೆಗೆ ಗೃಹಸಚಿವರ ಗ್ರೀನ್ ಸಿಗ್ನಲ್ ಸಿಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

2026ರ ಐಪಿಎಲ್ ಹಾಗೂ ವಿಜಯ್ ಹಜಾರೆ ಟ್ರೋಫಿ ಸೇರಿದಂತೆ ಪ್ರಮುಖ ಕ್ರಿಕೆಟ್ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸುವ ಕುರಿತು ಗೃಹಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಹಾಗೂ ಕಾರ್ಯದರ್ಶಿ ವಿನಯ್ ಮೃತ್ಯುಂಜಯ ಅವರು ಇತ್ತೀಚೆಗೆ ಗೃಹಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ, ಮುಂಬರುವ ಕ್ರಿಕೆಟ್ ಸರಣಿಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಪರಮೇಶ್ವರ್ ಅವರು, “ಮೈಕೆಲ್ ಡಿ. ಕುನ್ಹಾ ವರದಿಯನ್ನು ಪರಿಶೀಲಿಸಿದ ಬಳಿಕವೇ ಪಂದ್ಯಗಳ ಆಯೋಜನೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಕೆಎಸ್‌ಸಿಎ ಸಂಸ್ಥೆಯು ಕುನ್ಹಾ ವರದಿಯಲ್ಲಿನ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆಯಲಾಗುವುದು. ವರದಿಯ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದ ಅವರು, “ಜನರು ನಮ್ಮ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದು ನಮ್ಮ ಆದ್ಯ ಕರ್ತವ್ಯ. ಅದರಂತೆ ನಾವು ಕೆಲಸ ಮಾಡುತ್ತಿದ್ದೇವೆ,” ಎಂದರು.

error: Content is protected !!