IPL ಹರಾಜು | ಕೋಟಿ ಕೋಟಿ ಕೊಟ್ಟು ಇಬ್ಬರು ವಿಕೆಟ್ ಕೀಪರ್, ಆಸಿಸ್​ ಬೌಲರ್​ಗೆ ಮಣೆ ಹಾಕಿದ ಆರ್‌ಸಿಬಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಡವಾಗಿಯಾದರೂ ಉತ್ತಮ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಿದ್ದ ಆರ್‌ಸಿಬಿ ಫ್ರಾಂಚೈಸಿ, ಇದೀಗ ಸಾಕಷ್ಟು ಅಳೆದುತೂಗಿ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಓರ್ವ ವೇಗದ ಬೌಲರ್ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಂಗ್ಲೆಂಡ್ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಫಿಲ್ ಸಾಲ್ಟ್ ಅವರನ್ನು ಬರೋಬ್ಬರಿ 11.50 ಕೋಟಿ ರುಪಾಯಿಗೆ ಖರೀದಿಸುವಲ್ಲಿ ಆರ್‌ಸಿಬಿ ತಂಡವು ಯಶಸ್ವಿಯಾಗಿದೆ.

ಇನ್ನು ಭಾರತದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಜಿತೇಶ್ ಶರ್ಮಾ ಅವರಿಗೆ 11 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ.

ಇನ್ನು 2023ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಆಸ್ಟ್ರೇಲಿಯಾದ ಅನುಭವಿ ವೇಗಿ ಜೋಶ್ ಹೇಜಲ್‌ವುಡ್ ಅವರನ್ನು 12.50 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಬೆಂಗಳೂರು ತಂಡವು ಯಶಸ್ವಿಯಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!