IPL | ಬ್ಯಾಕ್ ಟು ಬ್ಯಾಕ್ ಸೋಲು.. ಚಾಂಪಿಯನ್ಸ್ ಟೀಮ್ ಕಥೆ ಇದ್ಯಾಕೆ ಹಿಂಗಾಗೋಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆದ್ದಿದ್ದ ಸಿಎಸ್​ಕೆ ಆ ಬಳಿಕ ಸತತ ಐದು ಮ್ಯಾಚ್​ಗಳಲ್ಲೂ ಸೋತಿದೆ.

ಸತತ ಐದು ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿರಲಿಲ್ಲ. ಆದರೆ ಈ ಬಾರಿ ಚೆಪಾಕ್ ಮೈದಾನದಲ್ಲೇ CSK ಪಡೆಯ ಲೆಕ್ಕಾಚಾರಗಳು ಉಲ್ಟಾ ಹೊಡೆದಿದೆ.

ಚೆಪಾಕ್ ಮೈದಾನದಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ CSK ಸೋಲನುಭವಿಸಿದೆ. ಈ ಮೂಲಕ IPL ಇತಿಹಾಸದಲ್ಲಿ ಸಿಎಸ್​ಕೆ ತಂಡವು ಚೆಪಾಕ್ ಮೈದಾನದಲ್ಲಿ ಹ್ಯಾಟ್ರಿಕ್ ಸೋಲು ಕಂಡಿರಲಿಲ್ಲ. ಆದರೆ ಈ ಬಾರಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಚೆಪಾಕ್ ಮೈದಾನದಲ್ಲಿ 17 ವರ್ಷಗಳ ಬಳಿಕ ಗೆಲುವು ದಾಖಲಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!