ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ್ದ ವಿದೇಶಿ ಆಟಗಾರರನ್ನು ವಾಪಸು ಕಳುಹಿಸಲು ಸೂಕ್ತ ಮಾರ್ಗ ಕಂಡುಕೊಳ್ಳುತ್ತಿದ್ದೇವೆ ಎಂದು ಮುಖ್ಯಸ್ಥ ಬ್ರಿಜೇಶ್ ಪಟೇಲ್ ಮಂಗಳವಾರ ತಿಳಿಸಿದ್ದಾರೆ.
ವಿವಿಧ ಫ್ರಾಂಚೈಸಿಗಳ ಹಲವು ಆಟಗಾರರಲ್ಲಿ ಕೋವಿಡ್ ಸೋಂಕು ದೃಢಗೊಂಡ ಬೆನ್ನಲ್ಲೇ ತುರ್ತು ಸಭೆ ನಡೆಸಿರುವ ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿಯು, 14ನೇ ಆವೃತ್ತಿಯ ಟೂರ್ನಿಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟ ಅವಧಿಗೆ ಮುಂದೂಡಲು ನಿರ್ಧರಿಸಿತ್ತು.
ಇನ್ನು ಐಪಿಎಲ್ ಬಯೋಬಬಲ್ನಲ್ಲಿದ್ದ ಆಟಗಾರರಲ್ಲೂ ಕೋವಿಡ್ ಸೋಂಕು ತಗುಲಿತ್ತು. ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಎಲ್. ಬಾಲಾಜಿ, ಸನ್ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಹಾ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಅವರಿಗೆ ಕೋವಿಡ್ ಸೋಂಕು ದೃಢಗೊಂಡಿತ್ತು.
ಇನ್ನು ವಿದೇಶಿ ಆಟಗಾರರನ್ನು ನಾವು ಸುರಕ್ಷಿತವಾಗಿ ಮನೆಗೆ ಕಳುಹಿಸಬೇಕಿದೆ. ಅದಕ್ಕೆ ಬೇಕಾದ ಸೂಕ್ತ ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ಬ್ರಿಜೇಶ್ ಪಟೇಲ್ ತಿಳಿಸಿದ್ದಾರೆ.
ಆಸ್ಟ್ರೇಲಿಯಾದ 14, ನ್ಯೂಜಿಲೆಂಡ್ನ 10, ಇಂಗ್ಲೆಂಡ್ನ 11, ದಕ್ಷಿಣ ಆಫ್ರಿಕಾದ 11, ವೆಸ್ಟ್ಇಂಡೀಸ್ನ ಒಂಬತ್ತು, ಅಫ್ಗಾನಿಸ್ತಾನದ ಮೂವರು ಮತ್ತು ಬಾಂಗ್ಲಾದೇಶದ ಇಬ್ಬರು ಆಟಗಾರರು ಐಪಿಎಲ್ನ ವಿವಿಧ ಫ್ರಾಂಚೈಸಿಗಳಲ್ಲಿ ಉಳಿದುಕೊಂಡಿದ್ದಾರೆ. ಈ ಮೂದಲು ಟೂರ್ನಿ ಮಧ್ಯೆಯೇ ಆಸ್ಟ್ರೇಲಿಯಾದ ಮೂವರು ಆಟಗಾರರು ಸ್ವದೇಶಕ್ಕೆ ಮರಳಿದ್ದರು.