ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ್ದು, 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 254 ರನ್ಗಳ ಬೃಹತ್ ಮೊತ್ತ ದಾಖಲಿಸಿದೆ.
ಕೊಹ್ಲಿ, ಪಡಿಕ್ಕಲ್ ಜೊತೆಯಾಟ
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ಪರ ವೆಂಕಟೇಶ್ ಅಯ್ಯರ್ 19 ರನ್ಗಳಿಸಿ ಔಟಾದರು. ನಂತರ ಬಂದ ಪಡಿಕ್ಕಲ್ 2ನೇ ವಿಕೆಟ್ಗೆ ಕೊಹ್ಲಿ ಜೊತೆ ಸೇರಿ ಕೇವಲ 38 ಎಸೆತಗಳಲ್ಲಿ 72 ರನ್ ಸೇರಿಸಿದರು. ಅತ್ತ ಸ್ಪೋಟಕ ಬ್ಯಾಟಿಂಗ್ ನಡೆಸುತ್ತಿದ್ದ ಕೊಹ್ಲಿ 25 ಎಸೆತಗಳಲ್ಲಿ 43 ರನ್ಗಳಿಸಿ ಬೌಲ್ಡ್ ಆದರು. ಪಡಿಕ್ಕಲ್ 19 ಎಸೆತಗಳಲ್ಲಿ 30 ರನ್ಗಳಿಸಿ ಬಟ್ಲರ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಪಾಟೀದಾರ್ ಸ್ಪೋಟಕ ಬ್ಯಾಟಿಂಗ್
ಬಳಿಕ ಬಂದ ನಾಯಕ ರಜತ್ ಪಾಟೀದಾರ್ ಹಾಗೂ ಕೃನಾಲ್ ಪಾಂಡ್ಯ ಬ್ಯಾಟಿಂಗ್ ಅಬ್ಬರ ಶುರು ಮಾಡಿಕೊಂಡರು. ಈ ಇಬ್ಬರು 4ನೇ ವಿಕೆಟ್ ಜೊತೆಯಾಟದಲ್ಲಿ 95 ರನ್ಗಳ ಭರ್ಜರಿ ಜೊತೆಯಾಟ ನೀಡಿದರು. 28 ಎಸೆತಗಳಲ್ಲಿ 43 ರನ್ಗಳಿಸಿದ್ದ ಕೃನಾಲ್ ಪಾಂಡ್ಯ 17ನೇ ಓವರ್ನಲ್ಲಿ ರಬಾಡಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಸ್ಫೋಟಕ ಆಟಗಾರ ಟಿಮ್ ಡೇವಿಡ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾದರು. 5 ಎಸೆತಗಳಲ್ಲಿ 4 ರನ್ಗಳಿಸಿ ಬೌಲ್ಡ್ ಆದರು. ಆದರೆ ನಾಯಕ ರಜತ್ ಪಾಟೀದಾರ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ 33 ಎಸೆತಗಳಲ್ಲಿ ಅಜೇಯ 93 ರನ್ಗಳಿಸಿ ತಂಡದ ಮೊತ್ತವನ್ನು 250 ರ ಗಡಿ ದಾಟಿಸಿದರು.



