May 10, 2026
Sunday, May 10, 2026
spot_img

IPL | ಲಖನೌ ವಿರುದ್ಧ ಗೆದ್ದು ಬೀಗಿದ ಚೆನ್ನೈ: ಪ್ಲೇಆಪ್ ಕನಸು ಜೀವಂತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇಆಫ್​ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಲಖನೌ ನೀಡಿದ 204 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್​ಕೆ ಉತ್ತಮ ಆರಂಭ ಸಿಕ್ಕಿತು. ಸಂಜು ಸ್ಯಾಮ್ಸನ್ 28 ರನ್​ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು. ಬಳಿಕ ಬಂದ ಉರ್ವಿಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದರು. ಉರ್ವಿಲ್ 23 ಎಸೆತಗಳಲ್ಲಿ 2 ಬೌಂಡರಿ, 8 ಸಿಕ್ಸರ್​ಗಳ ಸಹಿತ 65 ರನ್​ಗಳಿಸಿದರು.

ನಾಯಕ ಗಾಯಕ್ವಾಡ್ 42 ರನ್​ಗಳಿಸಿ ತಂಡವನ್ನು ಗೆಲುವಿನ ದಡದತ್ತ ಕೊಂಡೊಯ್ಯಿದರು. ಗಾಯಕ್ವಾಡ್ ವಿಕೆಟ್ ನಂತರ ಕಾರ್ತಿಕ್ ಶರ್ಮಾ 20 ರನ್, ಡೆವಾಲ್ಡ್ ಬ್ರೆವಿಸ್ 10 ರನ್​ಗಳಿಸಿದರು. ಆದರೆ ಅಂತಿಮವಾಗಿ ಶಿವಂ ದುಬೆ 7 ಎಸೆತಗಳಲ್ಲಿ 15, ಪ್ರಶಾಂತ್ ವೀರ್ 12 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇತ್ತ ಲಕ್ನೋ ತಂಡದ ಪ್ಲೇ ಆಫ್​ ರೇಸ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !