ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ತಂಡ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇತ್ತ ಸನ್‌ರೈಸರ್ಸ್ ಹೈದರಾಬಾದ್ ಕೇವಲ ಒಂದು ಬದಲಾವಣೆ ಮಾಡಿದೆ. ಹರ್ಷ್ ದುಬೆ ಬದಲಿಗೆ ದಿಲ್ಶನ್ ಮಧುಶಂಕ ತಂಡಕ್ಕೆ ಸೇರಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.
ಇನ್ನು ಈ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದ್ದು, ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಅವಕಾಶ ಸಿಗಲಿದೆ.
ಚೆನ್ನೈ ಸೂಪರ್ ಕಿಂಗ್ಸ್: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಸರ್ಫರಾಜ್ ಖಾನ್, ಶಿವಂ ದುಬೆ, ಡೆವಾಲ್ಡ್ ಬ್ರೂವಿಸ್, ಜೇಮಿ ಓವರ್ಟನ್, ಮ್ಯಾಥ್ಯೂ ಶಾರ್ಟ್, ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್.
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (c), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂಗ್ ಕುಮಾರ್, ಪ್ರಫುಲ್ ಹಿಂಗೆ, ಸಾಕಿಬ್ ಹುಸೇನ್, ಇಶಾನ್ ಮಾಲಿಂಗ.



