IPL ಸಂಪೂರ್ಣ ವೇಳಾಪಟ್ಟಿ ಪ್ರಕಟ: ಚೆನ್ನೈ ನಲ್ಲಿ ಫೈನಲ್‌ ಮುಖಾಮುಖಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದ್ದು, ಸಂಪೂರ್ಣ ಟೂರ್ನಿಯು ಭಾರತದಲ್ಲೇ ನಡೆಯಲಿದೆ.

ಈ ಮೊದಲು ಬಿಸಿಸಿಐ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 21 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿತ್ತು. ಇದೀಗ ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಸಿಸಿಐ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ.

ಈ ಮೊದಲು ಬಿಸಿಸಿಐ ಏಪ್ರಿಲ್ 07ರವರೆಗಿನ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿತ್ತು. ಇದೀಗ ಇನ್ನುಳಿದ ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ.ಎರಡನೇ ಹಂತದ ವೇಳಾಪಟ್ಟಿಯಲ್ಲಿ ಒಟ್ಟು 11 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ.

ಮೇ 21 ಹಾಗೂ ಮೇ 22ರಂದು ಕ್ರಮವಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಎಲಿಮಿನೇಟರ್ ಹಾಗೂ ಮೊದಲ ಕ್ವಾಲಿಫೈಯರ್ ಪಂದ್ಯವು ನಡೆಯಲಿದೆ. ಇನ್ನು ಎರಡನೇ ಕ್ವಾಲಿಫೈಯರ್ ಪಂದ್ಯ ಹಾಗೂ ಫೈನಲ್ ಪಂದ್ಯವು ಕ್ರಮವಾಗಿ ಮೇ 24 ಹಾಗೂ 26ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿದೆ.



ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!