IPL 2023 | ನಾಳೆಗೆ ಕೊನೆಯಾಗಲಿದೆ ಐಪಿಎಲ್ ಕ್ರೇಝ್, ಅದ್ಧೂರಿ ಸಮಾರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್:

16 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತಕ್ಕೆ ಘಟ್ಟಕ್ಕೆ ಬಂದಿದ್ದು, ನಾಳೆ ಐಪಿಎಲ್ 2023 ಕೊನೆಯಾಗಲಿದೆ.

ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ಫೈನಲ್ಸ್‌ಗೆ ಪ್ರವೇಶ ಪಡೆದಿದೆ. ಭಾನುವಾರ ಹೈ ವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿದ್ದು, ಐಪಿಎಲ್ ಅಭಿಮಾನಿಗಳು ಕಾತರರಾಗಿದ್ದಾರೆ.

ಹಾಲಿ ಚಾಂಪಿಯನ್ಸ್ ಹಾಗೂ ಮಾಜಿ ಚಾಂಪಿಯನ್ಸ್ ಕಾದಾಟಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಈ ಬಾರಿ ಸಮಾರೋಪ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿದ್ದು, ಡಿಜೆ ನ್ಯೂಕ್ಲಿಯಾ ಪ್ರದರ್ಶನ ನಡೆಯಲಿದೆ. ಇದರ ಜೊತೆಗೆ ಜೋನಿತಾ ಗಾಂಧಿ ಮತ್ತು ಡಿವೈನ್ ಕಾಮಿಡಿ ಶೋ ಕೂಡ ಇದೆ.

ಅಹಮದಾಬಾನ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಡೆಯ ಪಂದ್ಯ ನಡೆಯಲಿದ್ದು, ಸಂಜೆ 6 ಗಂಟೆಗೆ ಸಮಾರಂಭ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!