ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಂಗಳೂರು:
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬುಕ್ಕಿಗಳನ್ನು ಮಂಗಳೂರು ಸಿಸಿಬಿ ಮತ್ತು ಇಕೋನಾಮಿಕ್ ಮತ್ತು ನಾರ್ಕೊಟಿಕ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ವಿಕ್ರಂ ಕುಂಪಲ, ಕೃಷ್ಣಾಪುರದ ಧನಪಾಲ್ ಶೆಟ್ಟಿ, ರಾಜಸ್ಥಾನ ಮೂಲದ ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಾಗಿರುವ ಕಮಲೇಶ್, ಮೂಲತಃ ಮುಂಬೈಯ ಹರೀಶ್ ಶೆಟ್ಟಿ, ಪ್ರೀತೇಶ್ ಯಾನೆ ಪ್ರೀತಮ್ ಆಶೋಕನಗರ, ಅವಿನಾಶ್ ಉರ್ವ ಮಾರಿಗುಡಿ ಬಂಧಿತರು.
ಈ ಪ್ರಕರಣದಲ್ಲಿ ಸುಮಾರು 20 ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು 20 ಲಕ್ಷ ನಗದು ಆನ್ ಲೈನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.