IPL ಕ್ರಿಕೆಟ್‌ ಹಬ್ಬ ಪುನರಾರಂಭ: ಹೋಂ ಗ್ರೌಂಡ್ ನಲ್ಲಿ KKR vs RCB ಜಟಾಪಟಿಗೆ ಕೌಂಟ್‌ಡೌನ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ ಐಪಿಎಲ್‌ ಹಬ್ಬ ಇಂದಿನಿಂದ ಪುನರಾರಂಭವಾಗುತ್ತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು KKR vs RCB ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿ ಇವತ್ತಿನ ಪಂದ್ಯದಲ್ಲಿ ಎಲ್ಲರ ಆಕರ್ಷಣೆಯಾಗಲಿದ್ದಾರೆ.

ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ 18ನೇ ಆವೃತ್ತಿಯ ಐಪಿಎಲ್‌ ಪ್ಲೇ-ಆಫ್‌ಗೆ ಪ್ರವೇಶಿಸಲಿದೆ. ಜೊತೆಗೆ 18 ಆವೃತ್ತಿಗಳಲ್ಲಿ ಮೊದಲ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ ಇತಿಹಾಸವನ್ನು ನಿರ್ಮಿಸಲಿದೆ.

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!