ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ ಟ್ರೋಪಿ ಯನ್ನು ಮುಡಿಗೇರಿಸಿಕೊಂಡಿದೆ.
ಕೆಕೆಆರ್, ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಚಿದಂಬರಂ ಸ್ಟೇಡಿಯಂನಲ್ಲಿ ಗೆಲ್ಲಲು ಕೇವಲ 114 ರನ್ ಗುರಿ ಪಡೆದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಇನ್ನೂ 57 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.
ಗುರಿ ಬೆನ್ನತ್ತಿದ ಕೆಕೆಆರ್ ತಂಡವು ಆರಂಭದಲ್ಲೇ ಸುನಿಲ್ ನರೈನ್ ವಿಕೆಟ್ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್ಗೆ ರೆಹಮನುಲ್ಲಾ ಗುರ್ಬಾಜ್ ಹಾಗೂ ವೆಂಕಟೇಶ್ ಅಯ್ಯರ್ ಕೇವಲ 45 ಎಸೆತಗಳಲ್ಲಿ 91 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
ಗುರ್ಬಾಜ್ 39 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರೆ, ವೆಂಕಟೇಶ್ ಅಯ್ಯರ್ ಅಜೇಯ 51 ರನ್ ಸಿಡಿಸಿ ಗೆಲುವಿನ ರೂವಾರಿ ಎನಿಸಿದರು.