ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದ್ದು, ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮ್ಯಾಚ್ ನಡೆಯಲಿದೆ.
ದೆಹಲಿ ತಂಡ ಸತತ ನಾಲ್ಕು ಮ್ಯಾಚ್ ಗೆದ್ದು ಮತ್ತೊಂದು ಗೆಲುವಿಗೆ ತಯಾರಿ ನಡೆಸಿದರೆ, ಇತ್ತ ಮುಂಬೈ ಸತತ ಸೋಲಿನಿಂದ ಹೊರ ಬರಲು ತಯಾರಿ ನಡೆಸಿದೆ.
ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಮುಂಬೈ ಮೊದಲು ಬ್ಯಾಟಿಂಗ್ ಮಾಡಲಿದೆ.
ಡೆಲ್ಲಿ ಕ್ಯಾಪಿಟಲ್ಸ್
ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.