ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿದ್ದು, ಮಿಚೆಲ್ ಮಾರ್ಷ್ ಬದಲಿಗೆ ರೋವ್ಮನ್ ಪೋವೆಲ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಇದರ ಜತೆಗೆ ಕನ್ನಡಿಗ ಮನೀಶ್ ಪಾಂಡೆ, ಲಲಿತ್ ಯಾದವ್ ಕೂಡಾ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಪೃಥ್ವಿ ಶಾಗೆ ವಿಶ್ರಾಂತಿ ನೀಡಲಾಗಿದ್ದು, ಮನೀಶ್ ಪಾಂಡೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ದೇವದತ್ ಪಡಿಕ್ಕಲ್ ಹಾಗೂ ಆಸಿಫ್‌ಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಬದಲಿಗೆ ಧೃವ್ ಜ್ವರೆಲ್ ಹಾಗೂ ಸಂದೀಪ್ ಶರ್ಮಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ಧೃವ್ ಜ್ವರೇಲ್ , ಶಿಮ್ರೊನ್ ಹೆಟ್ಮೇಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜುವೇಂದ್ರ ಚಹಲ್
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್(ನಾಯಕ), ಮನೀಶ್ ಪಾಂಡೆ, ರಿಲೇ ರೊಸ್ಸೌ, ಲಲಿತ್ ಯಾದವ್, ರೋವ್ಮನ್ ಪೋವೆಲ್ ಅಕ್ಷರ್ ಪಟೇಲ್, ಅಭಿಷೇಕ್ ಪೋರೆಲ್, ಕುಲ್ದೀಪ್, ಖಲೀಲ್ ಅಹಮ್ಮದ್, ಮುಕೇಶ್ ಕುಮಾರ್.