Saturday, October 11, 2025

ಮತ್ತೆ ಐಪಿಎಲ್ ಅಬ್ಬರ ಶುರು: ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮತ್ತೆ ಐಪಿಎಲ್ ಅಬ್ಬರ ಶುರುವಾಗಲಿದ್ದು, ಇದರ ಮೊದಲ ಹೆಜ್ಜೆಯಾಗಿ ಮುಂದಿನ ಡಿಸೆಂಬರ್‌ 13 ರಿಂದ 15ರ ಅವಧಿಯಲ್ಲಿ 2026ರ ಐಪಿಎಲ್‌ ಟೂರ್ನಿಗೆ ಮಿನಿ ಹರಾಜು ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡಲಾಗಿದೆ.

ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿಯನ್ನು ಪ್ರಕಟಿಸಲು ಐಪಿಎಲ್‌ ಮಂಡಳಿ ಸೂಚನೆ ನೀಡಿರುವುದಾಗಿ ವರದಿಗಳು ತಿಳಿಸಿವೆ.

3 ವರ್ಷಗಳಿಗೊಮ್ಮೆ ಮೆಗಾ ಹರಾಜು ನಡೆಯಲಿದೆ. 2025ರ ಐಪಿಎಲ್‌ ಟೂರ್ನಿ ವೇಳೆ ಮೆಗಾ ಹರಾಜು ನಡೆದಿತ್ತು. ಆದ್ದರಿಂದ ಈ ಬಾರಿ ಮಿನಿ ಹರಾಜು ನಡೆಯಲಿದೆ.

ಆದ್ರೆ ಬಿಸಿಸಿಐ (BCCI) ಈಗಾಗಲೇ ವಿಧಿಸಿರುವಂತೆ ಕಳೆದ ಬಾರಿಗಿಂತ ಫ್ರಾಂಚೈಸಿಗಳ ಪರ್ಸ್‌ ಮೊತ್ತ ಹಿಗ್ಗಲಿದೆ. ಈ ಹಿಂದೆ 90 ಕೋಟಿ ರೂ.ಗಳಷ್ಟಿದ್ದ ಐಪಿಎಲ್‌ ಫ್ರಾಂಚೈಸಿಗಳ ಪರ್ಸ್‌ 2023-24ರ ಐಪಿಎಲ್‌ ಟೂರ್ನಿಯಲ್ಲಿ 100 ಕೋಟಿ ರೂ.ಗೆ ಹೆಚ್ಚಿಸಲಾಗಿತ್ತು. 2025ರ ಐಪಿಎಲ್‌ ಟೂರ್ನಿಯ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಮೂರು ವರ್ಷಗಳ ಅವಧಿಗೆ ವೇತನ ಸೇರಿ ಪರ್ಸ್‌ ಮೊತ್ತವನ್ನ 157 ಕೋಟಿ ರೂ.ಗಳ ವರೆಗೆ ಹೆಚ್ಚಿಸಿದೆ. ಅದರಂತೆ 2025ರ ಐಪಿಎಲ್‌ ಟೂರ್ನಿಯಲ್ಲಿ ಫ್ರಾಂಚೈಸಿಗಳು ಸಂಬಳ ಮಿತಿ ಸೇರಿ ತಲಾ 146 ಕೋಟಿ ರೂ. ಬಳಕೆ ಮಾಡಿದ್ದವು. 2026ರ ಟೂರ್ನಿಗೆ 151 ಕೋಟಿ ರೂ. ಬಳಕೆ ಮಾಡಲಿದೆ .

error: Content is protected !!