ಕೆಲವೇ ದಿನಗಳಲ್ಲಿ IPL ಹಬ್ಬ ಶುರು: RCB ಪರ ಹೊಸ ಆರಂಭಿಕ ಜೋಡಿ ಕಣಕ್ಕಿಳಿಯೋದು ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL 2025 ಆರಂಭಕ್ಕೆ ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ RCB ಫ್ರಾಂಚೈಸಿ ಹೊಸ ಮಾಸ್ಟರ್ ಪ್ಲ್ಯಾನ್​ ರೂಪಿಸುತ್ತಿದೆ. ಈ ಬಾರಿ ಆರ್​ಸಿಬಿ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ಈಗಾಗಲೇ ನಿರ್ಧಾರವಾಗಿದೆ.

ಹೌದು, ಈ ಬಾರಿಯ ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸುವುದು ಖಚಿತವಾಗಿದೆ​. ಈ ವಿಚಾರವನ್ನು ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಖಚಿತಪಡಿಸಿದ್ದಾರೆ.

ಈ ಮೂಲಕ ಕೊಹ್ಲಿ ಹಾಗೂ ಸಾಲ್ಟ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಯೋಜನೆ ರೂಪಿಸಿರುವುದನ್ನು RCB ಫ್ರಾಂಚೈಸಿ ಬಹಿರಂಗಪಡಿಸಿದೆ.

ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 113 ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. 45.81ರ ಸರಾಸರಿಯಲ್ಲಿ ಒಟ್ಟು 4352 ರನ್ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆರಂಭಿಕ ಎನಿಸಿಕೊಂಡಿದ್ದಾರೆ.

ಫಿಲ್ ಸಾಲ್ಟ್ ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದ ಅನುಭವ ಹೊಂದಿದ್ದಾರೆ. ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಇನಿಂಗ್ಸ್​ ಆರಂಭಿಸಿದ್ದರು. 4 ಅರ್ಧಶತಕಗಳೊಂದಿಗೆ ಒಟ್ಟು 435 ರನ್ ಕಲೆಹಾಕಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!