ಹೊಸದಿಗಂತ ಕಲಬುರಗಿ:
ಇಂಡಿಯನ್ ಪ್ರೀಮಿಯರ್ ಲೀಗ್,ನ 18ನೇ ಆವೃತ್ತಿಯ ಎಲ್ಲಾ ಪಂದ್ಯಗಳು ಮುಗಿದಿದ್ದು,ಜೂನ್ ೩ರಂದು ಅಹಮದಾಬಾದ್,ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಬೆಂಗಳೂರು ಹಾಗೂ ಪಂಜಾಬ್ ನಡುವಿನ ಫೈನಲ್ ಹಣಾಹಣಿಯಲ್ಲಿ ಬೆಂಗಳೂರು ಗೆಲುವು ಸಾಧಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿಯಾಗಿ ಆಟವಾಡುವ ಮೂಲಕ ಪೈನಲ್ ನಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟೀದಾರ್ ನೇತೃತ್ವದಲ್ಲಿ ಮೈದಾನಕ್ಕೆ ಇಳಿಯಲಿರುವ ತಂಡ, ವಿರಾಟ್ ಕೋಹ್ಲಿ ಸೇರಿದಂತೆ ಇನ್ನೀತರ ಆಟಗಾರರು ಭರ್ಜರಿ ಬ್ಯಾಟಿಂಗ್ ಮಾಡುವ ವಿಶ್ವಾಸವಿದ್ದು,ಬೆಂಗಳೂರು ಈ ಬಾರಿ ಫೈನಲ್ ಪಂದ್ಯ ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿದೆ ಎಂದು ಹೇಳಿದರು.