ಬೆಂಗಳೂರಿನಲ್ಲಿ ಐಪಿಎಲ್ ಗೌಜಿ: ಇಂದು ರಾತ್ರಿ 11.30 ರವರೆಗೆ ಓಡಾಡಲಿದೆ ನಮ್ಮ ಮೆಟ್ರೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದು, ಈ ಹಿನ್ನೆಲೆ ಇಂದು ರಾತ್ರಿ 11.30ರವರೆಗೆ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, BMRCL ದಿನಾಂಕ 25,29 ಮಾರ್ಚ್ ಮತ್ತು 02 ಏಪ್ರಿಲ್ 2024 ರಂದು ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30 ಕ್ಕೆ ವಿಸ್ತರಿಸಲಾಗಿದೆ ಎಂದು ಹೇಳಿದೆ.

ಈ ಪಂದ್ಯದ ದಿನಗಳಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು 50ರೂ. ಮಾರಾಟಕ್ಕೆ ಲಭ್ಯವಿರುತ್ತದೆ, ಇದು ಕಬ್ಬನ್ ಪಾರ್ಕ್‌ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರಿಗೆ ಮಾನ್ಯವಾಗಿರುತ್ತದೆ ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.

ಎಂದಿನಂತೆ, QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು, ವಾಟ್ಸ್ ಆಪ್/ನಮ್ಮ ಮೆಟ್ರೋ ಅವ್ವೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ OR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!