ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಐಪಿಎಲ್ (IPL 2023) ಹಬ್ಬ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯಾವಳಿ ನಡೆಯುವ ದಿನಗಳಂದು ವೀಕ್ಷಣೆಗೆ ತೆರಳುವ ಸಾರ್ವಜನಿಕರ ಅನುಕೂಲ ದೃಷ್ಟಿಯಿಂದ ನಗರದ ಹಲವು ಭಾಗಗಳಿಗೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯವನ್ನು ಬಿಎಂಟಿಸಿ ಘೋಷಿಸಿದೆ.
2023ರ ಐಪಿಎಲ್ ಆವೃತ್ತಿಯ ಐದು ಲೀಗ್ ಪಂದ್ಯಾವಳಿಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈನಲ್ಲಿ ಆಡಲಿದೆ. ಉಳಿದ ಪಂದ್ಯಗಳು ಏಪ್ರಿಲ್ 10, 17, 26 ಮತ್ತು ಮೇ 21 ರಂದು ಬೆಂಗಳೂರಿನಲ್ಲಿ ನಡೆಯಲಿವೆ. ಈ ಹಿನ್ನೆಲೆ ರಾತ್ರಿ 11 ಗಂಟೆಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್ಚುವರಿ ಬಸ್ ಸೌಲಭ್ಯವಿದೆ.
ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್, ನೆಲಮಂಗಲ, ಯಲಹಂಕ 5ನೇ ಹಂತ, ಆರ್.ಕೆ.ಹೆಗಡೆ ನಗರ, ಬಾಗಲೂರು, ಹೊಸಕೋಟೆ. ಈ ಬಸ್ಸುಗಳು ಎಚ್ಎಎಲ್ ರಸ್ತೆ, ಹೂಡಿ, ಅಗರ ದೊಮ್ಮಸಂದ್ರ, ಹೊಸೂರು ರಸ್ತೆ, ಜಯದೇವ ಆಸ್ಪತ್ರೆ, ಎಂಸಿಟಿಸಿ- ನಾಯಂಡನಹಳ್ಳಿ, ಮಾಗಡಿ ರಸ್ತೆ, ಯಶವಂತಪುರ, ಹೆಬ್ಬಾಳ, ನಾಗವಾರ, ಟ್ಯಾನರಿ ರಸ್ತೆ, ಹೆಣ್ಣೂರು ರಸ್ತೆ, ಟಿನ್ ಫ್ಯಾಕ್ಟರಿ ಮಾರ್ಗವಾಗಿ ಸಂಚರಿಸಲಿವೆ.
ಇದೇ ರೀತಿಯಾಗಿ ನಮ್ಮ ಮೆಟ್ರೋ ಕೂಡ ಮಧ್ಯರಾತ್ರಿ 1 ಗಂಟೆಯ ತನಕ ಸೇವೆ ಇರಲಿದೆ ಎಂದು ಮೆಟ್ರೋ ಸಂಸ್ಥೆ ತಿಳಿಸಿದೆ.