ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಗೌಜಿ: ಈ 4 ದಿನ ಮೆಟ್ರೋ ಅವಧಿ ವಿಸ್ತರಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲಿ ಚುನಾವಣೆ ಜೊತೆಗೆ ಐಪಿಎಲ್ ಸಂಭ್ರಮ. ಕ್ರಿಕೆಟ್​ ಪ್ರೇಮಿಗಳು ಏಳೇಳ್ದೆ ಪಂದ್ಯದ ಗೌಜಿ ನಲ್ಲಿದ್ದಾರೆ. ಹೀಗಾಗಿ ಅವರಿಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ.

ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ.

ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್​ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ.

QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್​ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮೆಟ್ರೋ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!