IPL: ಗುಜರಾತ್ – ಮುಂಬೈ ತೀವ್ರ ಹಣಾಹಣಿ ನಿರೀಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ 35 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ.

2022ರಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸಿತ್ತು. ಈ ಬಾರಿ ಗುಜರಾತ್ ಟೈಟಾನ್ಸ್ ತಂಡ ಕಳೆದ ವರ್ಷ ಪಡೆದ ಸೋಲಿಗೆ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಲಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಫೈಟ್​ ನೀಡಲು ಚಿಂತಿಸುತ್ತಿದೆ.

ಐಪಿಎಲ್‌ನಲ್ಲಿ ಇದುವರೆಗೆ ಆಡಿದ 6 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ 4 ಪಂದ್ಯಗಳನ್ನು ಗೆದ್ದು ಒಟ್ಟು 8 ಅಂಕಗಳನ್ನು ಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡವು ಕೇವಲ 3 ಪಂದ್ಯಗಳನ್ನು ಗೆದ್ದಿದ್ದು, 6 ಅಂಕಗಳಿಂದ ಏಳನೇ ಸ್ಥಾನದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!