May 10, 2026
Sunday, May 10, 2026
spot_img

IPL | 13 ಎಸೆತಗಳಲ್ಲಿ ಅರ್ಧಶತಕ: ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಸಿಎಸ್​ಕೆ ಯುವ ಬ್ಯಾಟ್ಸ್ ಮ್ಯಾನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ಉರ್ವಿಲ್ ಪಟೇಲ್ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಐಪಿಎಲ್ ನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ .

ಚೆಪಾಕ್​ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಲಖನೌ 203 ರನ್​ಗಳಿಸಿತು. ಈ ಟಾರ್ಗೆಟ್ ಬೆನ್ನತ್ತಿದ್ದ ಚೆನ್ನೈ ಪರ ಸಂಜು ಸ್ಯಾಮ್ಸನ್​ 28 ರನ್​ಗಳಿಸಿದರು. ಬಳಿಕ 3ನೇ ಕ್ರಮಾಂಕದಲ್ಲಿ ಆಡಲು ಬಂದ ಉರ್ವಿಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಈ ಮೂಲಕ ಕೇವಲ 13 ಎಸೆತಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ವೇಗದ ಅರ್ಧಶತಕ ದಾಖಲಿಸಿದರು.

ಈ ಹಿಂದೆ ಐಪಿಎಲ್ 2023 ರಲ್ಲಿ ಕೋಲ್ಕತ್ತಾ ವಿರುದ್ಧ 13 ಎಸೆತಗಳಲ್ಲಿ ರಾಜಸ್ಥಾನ್ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಬಾರಿಸಿದ್ದರು. ಇದೀಗ ಈ ಸಾಧನೆಯನ್ನು ಉರ್ವಿಲ್ ಸರಿಗಟ್ಟಿದ್ದಾರೆ. ಉರ್ವಿಲ್ ಪಟೇಲ್ 23 ಎಸೆತಗಳಲ್ಲಿ 2 ಬೌಂಡರಿ, 8 ಸಿಕ್ಸರ್​ಗಳ ಸಹಿತ 65 ರನ್​ಗಳಿಸಿದರು.

ಐಪಿಎಲ್​ನಲ್ಲಿ ವೇಗದ ಅರ್ಧಶತಕ ಸಿಡಿಸಿದವರ ಪಟ್ಟಿಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ 2ನೇ ಸ್ಥಾನದಲ್ಲಿದ್ದಾರೆ.14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !