IPL | ತವರಿನಲ್ಲಿ ಹ್ಯಾಟ್ರಿಕ್‌ ಸೋಲು, ಚಾಲೆಂಜರ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್‌ಗೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತವರಿನಲ್ಲಿ RCBಗೆ ಹ್ಯಾಟ್ರಿಕ್‌ ಸೋಲಾಗಿದೆ. ಆರ್‌ಸಿಬಿ ವಿರುದ್ಧ ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಜಯ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದೆ.

7:30ಕ್ಕೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ 9:30ಕ್ಕೆ ಆರಂಭವಾಯಿತು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳುತ್ತಾ ಕೊನೆಯಲ್ಲಿ ಟಿಮ್‌ ಡೇವಿಡ್‌ ಸ್ಫೋಟಕ ಅರ್ಧಶತಕದ ನೆರವಿನಿಂದ 9 ವಿಕೆಟ್‌ ನಷ್ಟಕ್ಕೆ 95 ರನ್‌ ಕಲೆಹಾಕಿತು.

ಸುಲಭದ ಟಾರ್ಗೆಟ್ ಅನ್ನು ಬೆನ್ನಟ್ಟಿದ ಪಂಜಾಬ್‌ 12.1 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 98 ರನ್‌ ಹೊಡೆದು ಜಯಗಳಿಸಿತು. ಈ ಮೂಲಕ RCB ಮತ್ತೆ ತವರಿನಲ್ಲಿ ಸತತ ಸೋಲುಗಳನ್ನು ಅನುಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!