ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ .
ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಆರ್ ಸಿಬಿ ತಂಡವು ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ.
ಆರ್ಸಿಬಿ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ.
ಸಿಎಸ್ಕೆ ತಂಡ: ರಿತುರಾಜ್ ಗಾಯಕ್ವಾಡ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ಮ್ಯಾಟ್ ಹೆನ್ರಿ, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.



