IPL | ಕಿಂಗ್ ಕೊಹ್ಲಿ ಈಸ್ ಬ್ಯಾಕ್, ಇನ್ಮೇಲೆ RCB ಅಭಿಮಾನಿಗಳಿಗೆ ಹಬ್ಬ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಸೀಸನ್ ಆರಂಭಕ್ಕೆ ಕೇವಲ ಐದು ದಿನಗಳಿರುವಾಗ ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ. ಮಾ. 19 ರಂದು ಆರ್‌ಸಿಬಿಯ ಅನ್‌ಬಾಕ್ಸಿಂಗ್ ಕಾರ್ಯಕ್ರಮದ ನಂತರ, ಮಾ. 22 ರಂದು ಆರ್‌ಸಿಬಿ ಚೆನ್ನೈ ತಂಡವನ್ನು ಎದುರಿಸಲಿದೆ.ಇದಕ್ಕೂ ಮೊದಲೇ ಕಿಂಗ್ ಕೊಹ್ಲಿ ಆರ್‌ಸಿಬಿ ತಂಡ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ವಿರಾಟ್ ಕೊಹ್ಲಿ ವಿದೇಶದಿಂದ ವಿಮಾನದಲ್ಲಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇದೀಗ ಅವರು ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ವಿಡಿಯೋ ವೈರಲ್ ಆಗಿದೆ. ನೀವು ಹೇಗಿದ್ದೀರಿ ಎಂದು ವಿರಾಟ್ ಅವರನ್ನು ಕೇಳಿದಾಗ, ಅವರು “ಬಹುತ್ ಬಡಿಯಾ” ಎಂದು ಹೇಳಿರುವ ವಿಡಿಯೋ ಸಕತ್ ವೈರಲ್ ಆಗಿದೆ.

ಮಾ. 19 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್ ಬಾಕ್ಸಿಂಗ್ ಕಾರ್ಯಕ್ರಮ ನಡೆಯಲಿದೆ. ಅದಾದ ಬಳಿಕ ಚೆನ್ನೈ ವಿರುದ್ಧ ಬೆಂಗಳೂರು ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಎರಡು ಕಾರ್ಯಕ್ರಮಗಳಿಗೂ ಮುನ್ನ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!