ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿಂದು ಪಂಜಾಬ್ ಕಿಂಗ್ಸ್ , ಲಖನೌ ಸೂಪರ್ ಜೇಂಟ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಲಖನೌ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಎಲ್‌ಎಸ್‌ಜಿ ತಂಡ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಉಳಿದ 4 ಪಂದ್ಯಗಳಲ್ಲಿ ಕನಿಷ್ಠ 3 ಪಂದ್ಯಗಳನ್ನ ಗೆಲ್ಲಬೇಕಾದ ಒತ್ತಡದಲ್ಲಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ತಂಡ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. 10 ಪಂದ್ಯಗಳಿಂದ ಆರು ಗೆಲುವು ಮತ್ತು ಮೂರು ಸೋಲುಗಳೊಂದಿಗೆ 13 ಅಂಕಗಳನ್ನು ಗಳಿಸಿದೆ. ಪಂಜಾಬ್‌ನ ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು.
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ರಿಷಭ್ ಪಂತ್ (WK/c), ಡೇವಿಡ್ ಮಿಲ್ಲರ್, ಆಯುಷ್ ಬದೋನಿ, ಅಬ್ದುಲ್ ಸಮದ್, ಆಕಾಶ್ ಸಿಂಗ್, ಅವೇಶ್ ಖಾನ್, ಮಯಾಂಕ್ ಯಾದವ್, ದಿಗ್ವೇಶ್ ಸಿಂಗ್ ರಾಠಿ, ಪ್ರಿನ್ಸ್ ಯಾದವ್ ಪಂಜಾಬ್
ಕಿಂಗ್ಸ್ ಪ್ಲೇಯಿಂಗ್ XI: ಪ್ರಭಾಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ಸಿ), ಜೋಶ್ ಇಂಗ್ಲಿಸ್ (ವಿಕೆ), ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೋನಿಸ್, ಅಜ್ಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್