June 1, 2026
Monday, June 1, 2026
spot_img

ಶಾಸಕರ ಉಚಿತ ಟಿಕೆಟ್‌ ವ್ಯಾಮೋಹಕ್ಕೆ ಐಪಿಎಲ್ ಮ್ಯಾಚ್ ಶಿಫ್ಟ್: ನಿಖಿಲ್ ಕುಮಾರಸ್ವಾಮಿ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಟೂರ್ನಿ ಅದ್ದೂರಿಯಾಗಿ ನಡೆಯುತ್ತಿದ್ದು, ಇದರ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯವನ್ನು ಬಿಸಿಸಿಐ ಅಹಮದಾಬಾದ್‌ ಗೆ ಸ್ಥಳಾಂತರ ಮಾಡಿದೆ. ಇತ್ತ ಈ ನಿರ್ಧಾರದಿಂದ ಫೈನಲ್ ಪಂದ್ಯದ ಆತಿಥ್ಯವನ್ನು ಬೆಂಗಳೂರು ವಹಿಸಲಿದೆ ಎಂದು ಕಾತುರದಿಂದ ಕಾಯುತ್ತಿದ್ದ ಕನ್ನಡಿಗರಿಗೆ ನಿರಾಸೆ ಮೂಡಿದೆ.

ಇತ್ತ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ವೇದಿಕೆಯಾಗಿದ್ದು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಸಮರ ಶುರುವಾಗಿದೆ.

ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದ ನಾಯಕರಿಗೆ ಅಭಿನಂದನೆಗಳು. ವಿವಿಐಪಿ ಪಾಸ್‌ಗಳ ಆಸೆಯಿಂದ ನಮ್ಮೂರಿನಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಉಡುಗೊರೆಯಾಗಿ ನೀಡಿದ್ದೀರಿ ಎಂದು ಟೀಕಿಸಿದರು.

ಕ್ರಿಕೆಟ್ ಅಭಿಮಾನಿಗಳಿಗಾಗಿ ಕ್ರೀಡಾಂಗಣ ಇರುವುದು, ಯಾವುದೇ ವಿಐಪಿಗಳಿಗಾಗಿ ಅಲ್ಲ. ಕೆಲವು ಶಾಸಕರು ಉಚಿತ ಟಿಕೆಟ್‌ ಬಯಕೆಯಿಂದಾಗಿ ಇಂದು ಬೆಂಗಳೂರಿನ ಘನತೆ ರಾಷ್ಟ್ರಮಟ್ಟದಲ್ಲಿ ಕುಸಿದಿದೆ. ಬಿಸಿಸಿಐ ನಿರ್ಧಾರವು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಲಿ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !