September 21, 2026
Monday, September 21, 2026
spot_img

ಐಪಿಎಲ್‌ನ ಮೆಗಾ ಟೂರ್ನಿಯ ವೇಳಾಪಟ್ಟಿ ಪ್ರಕಟ: ಮಾ.28ಕ್ಕೆ ಆರ್‌ಸಿಬಿ vs ಎಸ್‌ಆರ್‌ಹೆಚ್‌ ಮುಖಾಮುಖಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಿಡುಗಡೆ ಮಾಡಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಎದುರಿಸುವ ಮೂಲಕ ಟೂರ್ನಿಗೆ ಚಾಲನೆ ನೀಡಲಿದೆ.

ಬಿಸಿಸಿಐ ಸದ್ಯಕ್ಕೆ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಚುನಾವಣಾ ದಿನಾಂಕಗಳು ಘೋಷಣೆಯಾದ ನಂತರ ಟೂರ್ನಿಯ ಉಳಿದ ಪಂದ್ಯಗಳ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

ಟೂರ್ನಿಯ ಮೊದಲ ಹಂತದಲ್ಲಿ ಒಟ್ಟು 20 ಪಂದ್ಯಗಳು ನಡೆಯಲಿದ್ದು, ಬೆಂಗಳೂರು, ಮುಂಬೈ, ಗುವಾಹಟಿ, ನ್ಯೂ ಚಂಡೀಗಢ, ಲಕ್ನೋ, ಕೋಲ್ಕತ್ತಾ, ಚೆನ್ನೈ, ದೆಹಲಿ, ಅಹಮದಾಬಾದ್ ಮತ್ತು ಹೈದರಾಬಾದ್ ಸೇರಿದಂತೆ 10 ವೇದಿಕೆಗಳಲ್ಲಿ ಪಂದ್ಯಗಳು ಜರುಗಲಿವೆ.

ಮೊದಲ 20 ದಿನಗಳಲ್ಲಿ ಒಟ್ಟು ನಾಲ್ಕು ‘ಡಬಲ್ ಹೆಡರ್’ (ದಿನಕ್ಕೆ ಎರಡು ಪಂದ್ಯ) ಪಂದ್ಯಗಳು ನಡೆಯಲಿವೆ. ಮಧ್ಯಾಹ್ನದ ಪಂದ್ಯ ಎಂದಿನಂತೆ 3.30ಕ್ಕೆ ನಡೆಯಲಿದ್ದರೆ, ಸಂಜೆಯ ಪಂದ್ಯ 7.30ಕ್ಕೆ ನಡೆಯಲಿದೆ. ಸೀಸನ್‌ನ ಮೊದಲ ಡಬಲ್ ಹೆಡರ್ ಏಪ್ರಿಲ್ 4 ರಂದು ನಡೆಯಲಿದ್ದು, ಮಧ್ಯಾಹ್ನ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಹಾಗೂ ಸಂಜೆ ಅಹಮದಾಬಾದ್‌ನಲ್ಲಿ ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯಗಳು ಜರುಗಲಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !