ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯ ಪಂದ್ಯದಲ್ಲಿಂದು ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಮುಂಬೈ ಕೊನೆಯ ಪಂದ್ಯ ಗೆದ್ದು ಟೂರ್ನಿಗೆ ಗುಡ್ ಬೈ ಹೇಳಲು ಎದುರು ನೋಡುತ್ತಿದೆ. ಇನ್ನೊಂದೆಡೆ ಲಖನೌ ತಂಡದಲ್ಲಿ ಎರಡು ಮಹತ್ವದ ಬದಲಾವಣೆ ಮಾಡಲಾಗಿದ್ದು, ಕ್ವಿಂಟನ್ ಡಿ ಕಾಕ್ ಹೊರಬಿದ್ದಿದ್ದಾರೆ. ಡಿ ಕಾಕ್ ಬದಲಿಗೆ ಮ್ಯಾಟ್ ಹೆನ್ರಿ ತಂಡ ಕೂಡಿಕೊಂಡಿದ್ದಾರೆ. ಇನ್ನು ಕನ್ನಡಿಗ ದೇವದತ್ ಪಡಿಕ್ಕಲ್‌ಗೂ ಲಖನೌ ಆಡುವ ಹನ್ನೊಂದರ ಬಳಗದಲ್ಲಿ ಮಣೆ ಹಾಕಲಾಗಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿದೆ. ಮುಂಬೈ ತಂಡವು ಸದ್ಯ 13 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿದ್ದು, 9 ಪಂದ್ಯಗಳನ್ನು ಸೋತು ಕೇವಲ 8 ಅಂಕ ಸಂಪಾದಿಸಿದೆ.
ಅತ್ತ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ 13ರಲ್ಲಿ 6 ಪಂದ್ಯ ಗೆದ್ದಿದ್ದು, 12 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ತಂಡ ಪ್ಲೇ-ಆಫ್‌ನಿಂದ ಅಧಿಕೃತವಾಗಿ ಹೊರಬೀಳಲಿದ್ದರೂ, ಕಳಪೆ ನೆಟ್ ರನ್‌ರೇಟ್ (-0.787) ಹೊ೦ದಿರುವ ಕಾರಣ ನಾಕೌಟ್‌ಗೇರುವ ಸಾಧ್ಯತೆಯಿಲ್ಲ.