ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಮುಂದೂಡಲಾಗಿದ್ದ ಐಪಿಎಲ್ ಮುಂದಿನ ವಾರದಿಂದ ಆರಂಭವಾಗುವ ಸಾಧ್ಯತೆಗಳಿದೆ.
ಬಿಸಿಸಿಐ (BCCI), ಉಳಿದ ಎಲ್ಲಾ ಪಂದ್ಯಗಳನ್ನು ದಕ್ಷಿಣ ಭಾರತದ ಮೂರು ನಗರಗಳಲ್ಲಿ ನಡೆಸಲು ತೀರ್ಮಾನಿಸಿದೆ ಎಂದು ಇಎಸ್‌ಪಿಎನ್ ವರದಿ ಮಾಡಿದೆ.
ಐಪಿಎಲ್ 2025 ರಲ್ಲಿ ಇಲ್ಲಿಯವರೆಗೆ 57 ಪಂದ್ಯಗಳು ನಡೆದಿವೆ. 58 ನೇ ಪಂದ್ಯವು ಮೇ 8 ರಂದು ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಶಸ್ತ್ರಾಸ್ತ್ರ ದಾಳಿ ಆರಂಭವಾದ ಕಾರಣ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಆ ಬಳಿಕ ಸಭೆ ನಡೆಸಿದ್ದ ಬಿಸಿಸಿಐ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಲು ನಿರ್ಧರಿಸಿತ್ತು.
ಇದೀಗ ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಗಳನ್ನು ದಕ್ಷಿಣ ಭಾರತದ 3 ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ನಲ್ಲಿ ನಡೆಸಲು ತೀರ್ಮಾನಿಸಿದೆ ಎಂದು ಇಎಸ್‌ಪಿಎನ್ ವರದಿ ಮಾಡಿದೆ. ಈ ಮೂರು ನಗರಗಳಲ್ಲಿ ಯಾವ ಮೈದಾನದಲ್ಲಿ ಎಷ್ಟು ಪಂದ್ಯಗಳು ನಡೆಯಲಿವೆ. ನಾಕೌಟ್ ಪಂದ್ಯಗಳು ಹಾಗೂ ಪೈನಲ್ ಪಂದ್ಯ ಎಲ್ಲಿ ನಡೆಯಲಿದೆ ಎಂಬುದು ಇನ್ನಷ್ಟೇ ಹೊರಬೀಳಬೇಕಿದೆ. ಆದಾಗ್ಯೂ ಕದನ ವಿರಾಮ ಘೋಷಣೆಯಾಗಿರುವುದರಿಂದ ಬೇರೆ ಸ್ಥಳಗಳ ಬಗ್ಗೆಯೂ ಬಿಸಿಸಿಐ ಯೋಚಿಸಲಿದೆ.