ಐಪಿಎಲ್‌ ಪ್ಲೇಯರ್‌ ಶಿವಾಲಿಕ್‌ ಶರ್ಮ ವಿರುದ್ಧ ಅತ್ಯಾಚಾರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕಳೆದ ವರ್ಷ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಪ್ಲೇಯರ್‌ ಆಗಿದ್ದ ಕ್ರಿಕೆಟಿಗ ಶಿವಾಲಿಕ್‌ ಶರ್ಮ ವಿರುದ್ಧ ರೇಪ್‌ ಕೇಸ್‌ ದಾಖಲಾಗಿದೆ.

ರಾಜಸ್ಥಾನದ ಜೋಧ್‌ಪುರದ ಕುಡಿ ಭಗತ್ಸುನಿ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಆನಂದ್ ಸಿಂಗ್, ದೂರುದಾರೆಯಾಗಿರುವ ಯುವತಿ ಕುಡಿ ಭಗತ್ಸುನಿಯ ಸೆಕ್ಟರ್ 2 ರ ನಿವಾಸಿಯಾಗಿದ್ದು, ಅವರು ಶಿವಾಲಿಕ್ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಕ್ರಿಕೆಟಿಗನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಶರ್ಮಾ ದೇಶೀಯ ಕ್ರಿಕೆಟ್‌ನಲ್ಲಿ ಬರೋಡಾವನ್ನು ಪ್ರತಿನಿಧಿಸಿದ್ದಾರೆ. ಸಂತ್ರಸ್ಥೆಯ ವೈದ್ಯಕೀಯ ವರದಿಗಳನ್ನು ದಾಖಲಿಸಿದ ನಂತರ ಮತ್ತು BNNS ಸೆಕ್ಷನ್ 180 ರ ಅಡಿಯಲ್ಲಿ ನ್ಯಾಯಾಲಯದ ಮುಂದೆ ದೂರುದಾರರ ನ್ಯಾಯಾಂಗ ಹೇಳಿಕೆಯನ್ನು ಪಡೆದುಕೊಂಡ ನಂತರ ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗಪಡಿಸಿದರು.

ಹುಡುಗಿ ಫೆಬ್ರವರಿ 2023 ರಲ್ಲಿ ಗುಜರಾತ್‌ನ ವಡೋದರಾಕ್ಕೆ ಹೋಗಿದ್ದೆ ಮತ್ತು ಆಗ ಶಿವಾಲಿಕ್ ಅವರನ್ನು ಸಂಪರ್ಕಿಸಿದ್ದೆ ಎಂದು ಹೇಳಿದ್ದಾಳೆ. ಶಿವಾಲಿಕ್ ಗುಜರಾತ್‌ನ ವಡೋದರಾ ನಿವಾಸಿ ಆಗಿದ್ದಾನೆ.

ಯುವತಿಯ ಪ್ರಕಾರ, ನಿಶ್ಚಿತಾರ್ಥದ ನಂತರ, ಶಿವಾಲಿಕ್ ಜೋಧ್‌ಪುರಕ್ಕೆ ಹಿಂತಿರುಗಿದಾಗ, ಅವರು ದೈಹಿಕ ಸಂಬಂಧ ಹೊಂದಿದ್ದರು. ಇಬ್ಬರೂ ಜೈಪುರ ಸೇರಿದಂತೆ ರಾಜಸ್ಥಾನದ ಹಲವು ಸ್ಥಳಗಳಿಗೆ ಹೋಗಿದ್ದರು. ಆದರೆ, ಆಗಸ್ಟ್ 2024 ರಲ್ಲಿ ಯುವತಿಯನ್ನು ವಡೋದರಾಕ್ಕೆ ಕರೆಸಿದಾಗ ವಿಷಯಗಳು ಬೇರೆಯದೇ ತಿರುವು ಪಡೆದುಕೊಂಡವು ಮತ್ತು ಶಿವಾಲಿಕ್ ಅವರ ಪೋಷಕರು ಅವರು ಕ್ರಿಕೆಟಿಗ, ಅವರಿಗೆ ಬೇರೆ ಸ್ಥಳಗಳಿಂದ ಪ್ರಸ್ತಾಪಗಳು ಬರುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರೊಂದಿಗಿನ ಈ ನಿಶ್ಚಿತಾರ್ಥ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇದಾದ ನಂತರ, ಯುವತಿ ಪೊಲೀಸರ ಬಳಿ ಹೋಗಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣವನ್ನು ಕುಡಿ ಭಗತ್ಸುನಿ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!