ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ಈ ಗಾಗಲೇ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ತಂಡವು ಏಳು ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ತಂಡದ ಕೊನೆಯ ಪಂದ್ಯ ಮಳೆಯಿಂದಾಗಿ ರದ್ದಾಯಿತು, ಇದರಿಂದಾಗಿ ತಂಡವು ಅಂಕಗಳನ್ನು ಹಂಚಿಕೊಂಡಿದ್ದು, ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದರೆ ಪಂಜಾಬ್ 2ನೇ ಸ್ಥಾನಕ್ಕೆ ಲಗ್ಗೆಯಿಡಲಿದೆ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (WK), ಶ್ರೇಯಸ್ ಅಯ್ಯರ್ (c), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಸೂರ್ಯಾಂಶ್ ಶೆಡ್ಜ್, ಹರ್‌ಪ್ರೀತ್ ಬ್ರಾರ್, ಮಾರ್ಕೊ ಜಾನ್ಸೆನ್, ಅಜ್ಮತುಲ್ಲಾ ಒಮರ್ಜಾಯ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಲ್
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕುರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ದೀಪಕ್ ಹೂಡಾ, ಎಂಎಸ್ ಧೋನಿ (ಸಿ ಮತ್ತು ವಿಕೆ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತೀಶ ಪತೀರಣ