ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ .
ಒಂದೆಡೆ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ಮತ್ತೆ ಗೆಲುವಿನ ಹಳಿ ಏರುವ ಪ್ರಯತ್ನದಲ್ಲಿದ್ದು, ಈ ಮೂಲಕ ಅಗ್ರಸ್ಥಾನಕ್ಕೆ ಕಣ್ಣಿಟ್ಟಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.
ಪ್ರಸ್ತುತ ಪಂಜಾಬ್ ಕಿಂಗ್ಸ್ 10 ಪಂದ್ಯಗಳಲ್ಲಿ 6 ಗೆಲುವು ಮತ್ತು 1 ಡ್ರಾದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ 11 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸಾಹಿಲ್ ಪರಾಖ್, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಷರ್ ಪಟೇಲ್ (ನಾಯಕ), ಮಾಧವ್ ತಿವಾರಿ, ಮುಖೇಶ್ ಕುಮಾರ್, ಆಕಿಬ್ ನಬಿ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಟಾರ್ಕ್.
ಪಂಜಾಬ್ ಕಿಂಗ್ಸ್: ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಮಾರ್ಕೊ ಯಾನ್ಸೆನ್, ಬೆನ್ ದ್ವಾರ್ಶುಯಿಸ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.



