May 15, 2026
Friday, May 15, 2026
spot_img

IPL | ಆರ್‌ಸಿಬಿಗೆ ನಾಯಕನ ಬಲ: ರಾಜಸ್ಥಾನಕ್ಕೆ ಬಿಗ್ ಟಾರ್ಗೆಟ್ ನೀಡಿದ ಬೆಂಗಳೂರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾಯಕ ರಜತ್ ಪಾಟೀದಾರ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್​ಗಳಿಸಿದ್ದು, ರಾಜಸ್ಥಾನ ರಾಯಲ್ಸ್ ಗೆ ಬಿಗ್ ಟಾರ್ಗೆಟ್ ನೀಡಿದೆ.

ಟಾಸ್ ಸೋತುಮೊದಲು ಬ್ಯಾಟಿಂಗ್ ಮಾಡಲು ಬಂದ ಆರ್​ಸಿಬಿ ಗೆ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡು ಆಘಾತ ನೀಡಿತು. ನಂತರ ಬಂದ ದೇವದತ್ ಪಡಿಕ್ಕಲ್ ಕೇವಲ14 ರನ್​ಗಳಿಸಿ ಔಟಾದರು. ವಿರಾಟ್ ಕೊಹ್ಲಿ 32 ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಕೃನಾಲ್ ಪಾಂಡ್ಯ 1 ಮತ್ತು ಜಿತೇಶ್ ಶರ್ಮಾ 5 ರನ್ ಗೆ ವಿಕೆಟ್ ಕೊಟ್ಟು ಪೆವಿಲಿಯನ್ ನತ್ತ ಮುಖಮಾಡಿದರು. ಟಿಮ್ ಡೇವಿಡ್ 13 ಕೂಡ ಕ್ಯಾಚ್ ನೀಡಿ ಹೊರನಡೆದರು.

ಒಂದೆಡೆ ವಿಕೆಟ್ ಬೀಳುತ್ತಿದ್ದರೂ ನಾಯಕನ ಜವಾಬ್ದಾರಿ ಮೆರೆದ ರಜತ್ ಪಾಟಿದಾರ್ 40 ಎಸೆತಗಳಲ್ಲಿ 63 ರನ್ ಸಿಡಿಸಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ರೊಮಾರಿಯೋ ಶೆಫರ್ಡ್ 22 ರನ್ ಸಿಡಿಸಿ ರನ್ ವೇಗ ಹೆಚ್ಚಿಸಿದರು. ಕೊನೆಯಲ್ಲಿ ವೆಂಕಟೇಶ್ ಅಯ್ಯರ್ 29 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು. ಅಂತಿಮವಾಗಿ ಆರ್ ಸಿಬಿ 8 ವಿಕೆಟ್‌ ನಷ್ಟಕ್ಕೆ 201 ರನ್‌ ಬಾರಿಸಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !